ಬೆಂಗಳೂರು, ಆಗಸ್ಟ್ 17: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಅದರ ಪರಿಣಾಮ ಕರ್ನಾಟಕ ಸೇರಿ ಹಲವು ರಾಜ್ಯಗಳ ಮೇಲಾಗಲಿದೆ. ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಳವಾಗಲಿದೆ. ಆಗಸ್ಟ್ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇವಲ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಕೆಲವೆಡೆ ಕೂಡ ಹೆಚ್ಚು ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ರಾಮನಗರ, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಆಗುಂಬೆ, ಕಮ್ಮರಡಿ, ಗೇರುಸೊಪ್ಪ, ಶೃಂಗೇರಿ, ಸಿದ್ದಾಪುರ, ಕೊಪ್ಪ, ಧರ್ಮಸ್ಥಳ, ಭಾಗಮಂಡಲದಲ್ಲಿ ಅತ್ಯಧಿಕ ಮಳೆಯಾಗಿದೆ. ಮೂಡುಬಿದಿರೆ, ಜಯಪುರ, ಬೆಳ್ತಂಗಡಿ, ಸುಳ್ಯ, ಮುನಿರಾಬಾದ್, ಲೋಂಡಾ, ಕಳಸ, ಕದ್ರಾ, ಸೋಮವಾರಪೇಟೆ, ಶಕ್ತಿನಗರ, ನಾಪೋಕ್ಲು, ಕೊಟ್ಟಿಗೆಹಾರ, ಖಾನಾಪುರ, ಹುಂಚದಕಟ್ಟೆ, ಬಂಟವಾಳ, ಯಲ್ಲಾಪುರದಲ್ಲಿ ಮಳೆಯಾಗಿದೆ.

