ಭಾರಿ ಮಳೆ ಹಿನ್ನೆಲೆ-ಉ.ಕ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕಾರವಾರ ಆ 18 : ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕನ್ನು ಬಿಟ್ಟು ಉಳಿದ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಡ, ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮಂಗಳವಾರ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ದಿ.19 ರಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.