
ಹಾವೇರಿ ಆ.19: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಅರ್ನವಿ(11), ಯಶ್(20) ಸ್ಥಳದಲ್ಲೇ ಮೃತಪಟ್ಟಿದ್ದು, 29 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಸಂಚರಿಸುತ್ತಿತ್ತು. ವೇಳೆ ಮೊಟೇಬೆನ್ನೂರು ಗ್ರಾಮದ ಬಳಿ ಬಸ್ ಮುಂದೆ ಕಾರು ಬಂದಿದೆ. ಕಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ.
ಪರಿಣಾಮ ಡಿವೈಡರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಸ್ ಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಹಾಗೂ ಎಸ್‌ಪಿ ಯಶೋದಾ ವಂಟಗೋಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬಳಿಕ ಕಾರ್ಯಚರಣೆ ನಡೆಸಿ ಬಸ್ ಮೇಲಕ್ಕೆ ಎತ್ತುವ ಕಾರ್ಯ ಮಾಡಲಾಯಿತು. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳ ಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

