ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ – ಐತಿಹಾಸಿಕ ಶ್ರೀಕೃಷ್ಣದೇವರಾಯ ಸಮಾಧಿ, ಸೂರ್ಯನಾರಾಯಣ ಮಂಟಪ ನೀರಿನಲ್ಲಿ ಮುಳುಗಡೆ

ಕೊಪ್ಪಳ, ಆಗಸ್ಟ್ 20: ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರಿನ ಒಳಹರಿವು ದಾಖಲಾಗಿದೆ. ಇದರಿಂದ ಡ್ಯಾಂನಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಈ ನೀರಿನ ಹರಿವಿನ ಪರಿಣಾಮವಾಗಿ ಗಂಗಾವತಿ ತಾಲೂಕಿನ ಆನೆಗೊಂದಿಯ ನವ ವೃಂದಾವನ ಪ್ರದೇಶದ ಐತಿಹಾಸಿಕ ಸ್ಮಾರಕಗಳು ಜಲಾವೃತವಾಗಿವೆ. ಶ್ರೀಕೃಷ್ಣದೇವರಾಯ ಸಮಾಧಿ ಹಾಗೂ ಸೂರ್ಯನಾರಾಯಣ ಮಂಟಪ ಈಗಾಗಲೇ ಬಹುತೇಕ ಮುಳುಗಡೆಯಾಗಿವೆ. ನವ ವೃಂದಾವನಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ದೋಣಿ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.