ಒಂದೇ ಕುಟುಂಬದ ಐವರ ಅಕಾಲಿಕ ಮರಣ – ಹೈದರಾಬಾದ್‌ನಲ್ಲಿ ಕಲಬುರಗಿ ಮೂಲದವರ ದುರಂತ

ಕಲಬುರಗಿ: ಹೈದರಾಬಾದ್‌ನ ಮಿಯಾಪುರದಲ್ಲಿ ಗುರುವಾರ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ನರಸಿಂಹ (60), ಪತ್ನಿ ವೆಂಕಟಮ್ಮ (55), ಮಗ ಅನಿಲ್ (32), ಮಗಳು ಕವಿತಾ (24) ಹಾಗೂ ಮೊಮ್ಮಗ ಅಪ್ಪು (2) ಎಂದು ಗುರುತಿಸಲಾಗಿದೆ. ಇದೀಗ ಐವರ ಮೃತದೇಹಗಳನ್ನು ಸ್ವಗ್ರಾಮ ಸೇಡಂ ತಾಲೂಕಿನ ರಂಜೋಳಕ್ಕೆ ಕರೆತರಲಾಗಿದೆ. 

ಹೈದರಾಬಾದಿನ ಮನೆಯಲ್ಲಿಯೇ ನಿಗೂಢವಾಗಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಗ್ರಾಮಸ್ಥರೆಲ್ಲ ಸೇರಿ ಹಣ ಸಂಗ್ರಹಿಸಿ, ಮೃತದೇಹಗಳನ್ನು ಗ್ರಾಮಕ್ಕೆ ತೆಗೆದುಕೊಂಡು ಬಂದಿದ್ದು, ಅಂತ್ಯಸಂಸ್ಕಾರಕ್ಕೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.