ಚಿತ್ರದುರ್ಗ: ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋಫೈನಾನ್ಸ್ ಕಿರುಕುಳ ಆರೋಪ ಕೇಳಿಬಂದಿದೆ.

ಗೃಹಿಣಿ ನೇತ್ರಾ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನೇತ್ರಾ ಮೈಕ್ರೋ ಫೈನಾನ್ಸ್‌ನಲ್ಲಿ 50 ಸಾವಿರ ರೂ. ಸಾಲ ಪಡೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೀಗಾಗಿ ಮೃತಳ ಸಂಬಂಧಿಕರಿಂದ ಮೈಕ್ರೋ ಫೈನಾನ್ಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
