ಬೆಂಗಳೂರು: ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸಿ, ಕಂಡ ಕಂಡಲ್ಲೇ ಕೈ ತೋರಿಸಿ ಗುಂಡಿ ಅಗೆಸಿದ್ದ ಮುಸುಕುಧಾರಿಯನ್ನು ಎಸ್‌ಐಟಿ ಬಂಧಿಸಿದೆ. ಸದ್ಯ ಎಸ್‌ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನ ಮೇಲೆ ತೀವ್ರ ವಿಚಾರಣೆ ನಡೆಯುತ್ತಿದೆ. ಪಾತ್ರಧಾರಿ ಬಂಧನವಾಗುತ್ತಿದ್ದಂತೆ ಸೂತ್ರಧಾರಿಗಳಿಗೂ ಢವಢವ ಶುರುವಾಗಿದೆ.

ಈ ಹಿನ್ನೆಲೆಯಲ್ಲಿ, ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಾಧಾರ ಆರೋಪ ಮಾಡಿ ನಡೆದಿದ್ದ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಲು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ “ಧರ್ಮ ಸಂರಕ್ಷಣಾ ಸಮಾವೇಶ” ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವನ್ನು ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಯೋಜಿಸಿದ್ದು, ಬೆಂಗಳೂರಿನ ಧರ್ಮಸ್ಥಳ ಭಕ್ತರು ಹಾಗೂ ಬೆಂಗಳೂರು ಸುತ್ತಮುತ್ತಲಿನ ಊರುಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ.


