ಲಿಂಗನಮಕ್ಕಿ-ಗೇರುಸೊಪ್ಪ ಜಲಾಶಯದಿಂದ ಶರಾವತಿ ನದಿಗೆ ನೀರು ಬಿಡುಗಡೆ, ಗೇಟ್ಗಳಿಂದ ಧುಮ್ಮಿಕ್ಕುತ್ತಿರುವ ಜಲಧಾರೆ!

ಕರ್ನಾಟಕದಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಡ್ಯಾಂಗಳು ತುಂಬಿವೆ. ಅದರಂತೆ ಉತ್ತರಕನ್ನಡ-ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ಉಕ್ಕಿ ಹರಿಯುತ್ತಿರುವ ನದಿಗಳು ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಪ್ರಮುಖ ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಲಿಂಗನಮಕ್ಕಿ ಡ್ಯಾಂಗೆ ನೀರು ಹರಿದುಬರುತ್ತಿದ್ದು, ಜಲಾಶಯದ ನೀರಿನ ಸಂಗ್ರಹ ಹೆಚ್ಚಾಗಿದ್ದು ಡ್ಯಾಂನಿಂದ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ನೋಡುಗರ ಕಣ್ಮನ ಸೆಳೆಯುತ್ತಿದೆ. ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆ ಅಣೆಕಟ್ಟೆಯಿಂದ ನದಿಗೆ ನೀರನ್ನು ಹೊರ ಬಿಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿರುವ ಶರಾವತಿ ನದಿ ನೀರಿಗೆ ಅಡ್ಡಲಾಗಿ ಕಟ್ಟಿರುವ ಗೇರುಸೊಪ್ಪ ಜಲಾಶಯ ಕೂಡ ಭರ್ತಿಯಾಗುತ್ತಿದ್ದು ಜಲಾಶಯದಿಂದ ನೀರನ್ನು ಹೊರಬಿಡಲಾಗಿದೆ. ಇದೆ ರೀತಿ ಗೇರುಸೊಪ್ಪ ಆಣೆಕಟ್ಟೆಗೆ ಹೇರಳವಾಗಿ ನೀರು ಹರಿದುಬರುತ್ತಿದ್ದು, ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.