ಮೇಘಸ್ಫೋಟ ದುರಂತ – ಉತ್ತರಾಖಂಡದಲ್ಲಿ 5 ಸಾ**, 11 ನಾಪತ್ತೆ

ಉತ್ತರಾಖಂಡ: ಮೇಘಸ್ಫೋಟದಿಂದ ಸುರಿದ ಭಾರೀ ಮಳೆಯಿಂದ ರಾಜ್ಯದಲ್ಲಿ ಭೂಕುಸಿತ ಸಂಭವಿಸಿ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಇನ್ನೂ 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಮುಂಜಾನೆ ಸುರಿದ ಮಳೆಯಿಂದ ಬಾಗೇಶ್ವರ ಜಿಲ್ಲೆಯ ಕಪ್‌ಕೋಟ್ ಪ್ರದೇಶದ ಪೌಸಾರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಆರು ಮನೆಗಳು ಹಾನಿಗೊಳಗಾಗಿವೆ. ಇದರಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಕಾಣೆಯಾಗಿದ್ದಾರೆ ಹಾಗೂ ಒಬ್ಬರು ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಚಮೋಲಿ ಜಿಲ್ಲೆಯ ಮೊಪಾಟಾ ಗ್ರಾಮದಲ್ಲಿ ಭೂಕುಸಿತ ಸಂಭವಿಸಿ ಒಂದು ಮನೆ ಮತ್ತು ದನದ ಕೊಟ್ಟಿಗೆ ಕುಸಿದಿದೆ. ಈ ಘಟನೆದಲ್ಲಿ ದಂಪತಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.