ಕಾರವಾರ, ಸೆಪ್ಟೆಂಬರ್ 01: ನಗರದ ಸುಂಕೇರಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಸಚಿನ್ ಗಾಂವಕಾರ್ (42) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ವಾಪಸ್ ಬಂದ ನಂತರ ಬಾವಿಯ ಬಳಿ ಸ್ನಾನ ಮಾಡುವಾಗ ಆಕಸ್ಮಿಕವಾಗಿ ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


