ಮೈಸೂರು, ಸೆಪ್ಟೆಂಬರ್ 01: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಮೈಸೂರು ಪ್ರವಾಸದ ಅಂಗವಾಗಿ ಸೋಮವಾರ ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ರಾಷ್ಟ್ರಪತಿ ಮುರ್ಮು ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳಿದರು.

ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್, ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಮೈಸೂರು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
