ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ‘ವಾಟರ್ ಬೆಲ್’ ಯೋಜನೆ ಜಾರಿಗೆ

ಬೆಂಗಳೂರು: ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಶಾಲಾ ಸಮಯದಲ್ಲೇ ನೀರು ಕುಡಿಯಲು ವಿಶೇಷ ‘ವಾಟರ್ ಬೆಲ್’ ವ್ಯವಸ್ಥೆ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಕೇರಳದ ಶಾಲೆಗಳಲ್ಲಿ ಈಗಾಗಲೇ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಯಲ್ಲಿದೆ. ದಿನಕ್ಕೆ ಎರಡು ಬಾರಿ — ಬೆಳಿಗ್ಗೆ 10:30ಕ್ಕೆ ಹಾಗೂ ಮಧ್ಯಾಹ್ನ 2:30ಕ್ಕೆ ಬೆಲ್ ನೀಡಲಾಗುತ್ತದೆ. ಈ ಸಮಯದಲ್ಲಿ ಮಕ್ಕಳು ನೀರು ಕುಡಿಯುವಂತೆ ಮಾಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ.

ಕೇರಳದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ‘ವಾಟರ್ ಬೆಲ್’ ಕಾರ್ಯಕ್ರಮವನ್ನು ಕರ್ನಾಟಕದಲ್ಲೂ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆದಿದೆ.
ಶಿಕ್ಷಣ ಇಲಾಖೆಯ ಹಂತದಲ್ಲಿ ಈ ಕುರಿತು ಚರ್ಚೆಗಳು ಸಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ನೀರು ಕುಡಿಯುವ ಅಭ್ಯಾಸ ಬೆಳೆಸುವುದೇ ಇದರ ಉದ್ದೇಶ.
ಶೀಘ್ರದಲ್ಲೇ ರಾಜ್ಯದ ಶಾಲೆಗಳಲ್ಲೂ ಈ ಯೋಜನೆ ಅನುಷ್ಠಾನಗೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ.