ಲಕ್ನೋ: ಮುಂಬೈಗೆ ಬಾಂಬ್ ಸ್ಫೋಟ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ನೋಯ್ಡಾದಲ್ಲಿ ವಶಕ್ಕೆ ಪಡೆದಿದ್ದಾರೆ.ಶಂಕಿತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಮುಂದಿನ ತನಿಖೆಗಾಗಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಬಂಧಿತ ವ್ಯಕ್ತಿ. ಆರೋಪಿ ಅಶ್ವಿನ್ ಕುಮಾರ್ ನೋಯ್ಡಾದ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಬಳಸಿ ಬಾಂಬ್ ಬೆದರಿಕೆ ಹಾಕಿದ್ದಾನೆ. ತನಿಖೆಯ ಸಮಯದಲ್ಲಿ, ಬೆದರಿಕೆ ಹಾಕಲು ಬಳಸಲಾದ ಫೋನ್ ಮತ್ತು ಸಿಮ್ ಅನ್ನು ಸಹ ಅಪರಾಧ ವಿಭಾಗ ವಶಪಡಿಸಿಕೊಂಡಿದೆ. ಸದ್ಯ ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಗುತ್ತಿದೆ. ಮುಂಬೈ ತಲುಪಿದ ಬಳಿಕ ಹೆಚ್ಚಿನ ವಿಚಾರಣೆ ನಡೆಯಲಿದೆ.
ಪಾಕಿಸ್ತಾನ ಲಷ್ಕರ್-ಎ-ಜಿಹಾದಿ ಸಂಘಟನೆಯ 14 ಉಗ್ರರು ಭಾರತ ಪ್ರವೇಶಿಸಿದ್ದಾರೆ. 400 ಕೆಜಿ ಆರ್‌ಡಿಎಕ್ಸ್ ಸ್ಫೋಟಿಸಿ ಜನರನ್ನ ಕೊಲ್ಲಲಿದ್ದಾರೆ. ಅಲ್ಲದೇ ನಗರಾದ್ಯಂತ 34 ವಾಹನಗಳಲ್ಲಿ ಮಾನವ ಬಾಂಬ್ ಸ್ಫೋಟಿಸಲಾಗುವುದು ಎಂದು ಆರೋಪಿ ಅಶ್ವಿನ್ ಕುಮಾರ್ ಮುಂಬೈ ಸಂಚಾರ ಪೊಲೀಸ್ ಠಾಣೆಗೆ ಸಂದೇಶ ಕಳುಹಿಸಿದ್ದ.

