ಗದಗ: ಬೀದಿನಾಯಿ ದಾಳಿಯೊಂದರಿಂದ 4 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ, ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯಲ್ಲಿ ನಡೆದಿದೆ.

ಮನೋಜ್ ಬನ್ನಿ (4) ಮೇಲೆ ಬೀದಿನಾಯಿ ದಾಳಿ ನಡೆದಿದೆ. ಬಾಲಕನ ತಲೆ ಮತ್ತು ಬೆನ್ನು ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಮಕ್ಕಳನ್ನು ಮನೆಯಿಂದ ಹೊರಬಿಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಮುಂದೆ ಆಟ ಆಡುತ್ತಿರುವ ಚಿಕ್ಕ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ಮಾಡುತ್ತಿದ್ದರೂ ಸುಮ್ಮನೆ ಕುಳಿತಿರುವ ಲಕ್ಷ್ಮೇಶ್ವರ ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಹೆಚ್ಚುತ್ತಿರುವ ಬೀನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ.

