ಕ್ಯಾನ್ಬೆರಾ: ಮಲ್ಲಿಗೆ ಮುಡಿದು ಮೆಲ್ಬೋರ್ನ್ ಏರ್‌ಪೋರ್ಟ್‌ಗೆ ಬಂದಿಳಿದ ನಟಿ ನವ್ಯಾ ನಾಯರ್‌ಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ.

ನಟಿ ನವ್ಯಾ ನಾಯರ್ ಓಣಂ ಹಬ್ಬಕ್ಕಾಗಿ ಆಸ್ಟ್ರೇಲಿಯಾಗೆ ತೆರಳಿದ ವೇಳೆ, ತಂದೆಯವರು ಕೊಟ್ಟ ಮಲ್ಲಿಗೆ ಹೂವನ್ನು ಬ್ಯಾಗ್‌ನಲ್ಲಿ ಇಟ್ಟುಕೊಂಡು ಮೆಲ್ಬೋರ್ನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಇದನ್ನು ಗಮನಿಸಿದ ವಿಮಾನ ನಿಲ್ದಾಣದ ಅಧಿಕಾರಿಗಳು 1.14 ಲಕ್ಷ ರೂ. ದಂಡವನ್ನು ವಿಧಿಸಿದ್ದಾರೆ ಎಂದು ನಟಿ ಆಸ್ಟ್ರೇಲಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಹಿರಂಗಪಡಿಸಿದ್ದಾರೆ.
ಆಸ್ಟ್ರೇಲಿಯಾದ ನಿಯಾಮಾವಳಿಗಳ ಪ್ರಕಾರ, ಕೀಟಗಳು, ರೋಗಕಾರಕಗಳಂತಹ ಜೈವಿಕ ಅಪಾಯಗಳನ್ನು ತಡೆಯವ ಉದ್ದೇಶದಿಂದ ಯಾವುದೇ ಸಸ್ಯದ ಭಾಗವನ್ನಾದರೂ ವಿದೇಶಗಳಿಂದ ಆಸ್ಟ್ರೇಲಿಯಾಗೆ ತರುವ ಬಗ್ಗೆ ಮೊದಲ ಮಾಹಿತಿ ನೀಡಬೇಕು.
ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ನಟಿ, ಇದೊಂದು ಅನುಭವ. ಈ ರೀತಿಯ ಅನುಭವಗಳು ಹೊಸದನ್ನು ಕಲಿಸುತ್ತವೆ ಎಂದು ಬರೆದುಕೊಂಡಿದ್ದಾರೆ.
