ಕಠ್ಮಂಡು: ನೇಪಾಳದಲ್ಲಿ ಯುವಜನತೆ ಪ್ರತಿಭಟನೆಗೆ ಇಳಿದಿದ್ದು, ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ, ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ . ಇಂದು ಸಂಜೆಯ ಒಳಗೆ ನೇಪಾಳ ಪ್ರಧಾನಿ ಓಲಿ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು, ಸಂಸತ್ ಭವನದ ಗೋಡೆ ಒಡೆದು ಆಕ್ರೋಶವನ್ನ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಕಾರ್ಯಾಚರಣೆಯಲ್ಲಿ ತೊಡಗಿದೆ.
ನೇಪಾಳದ ಎಲ್ಲಾ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ದೇಶಿಯ ವಿಮಾನಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.
