ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ ಒಟ್ಟು 452 ಮತಗಳನ್ನು ಪಡೆದು ವಿಜಯದ ಪತಾಕೆ ಹಾರಿಸಿದ್ರು. ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯ ಮೂಲಕ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಕ್ಕೆ ನಿರ್ಣಾಯಕ ಗೆಲುವು ಸಿಕ್ಕಿದೆ..

ನವದೆಹಲಿ, ಸೆ 9: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್‌ಡಿಎ ನಾಮನಿರ್ದೇಶಿತರಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಸ್ಪಷ್ಟವಾಗಿ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದಾರೆ. ಇವರ ಗೆಲುವಿನ ಅಂತರ 152 ಮತಗಳು.