ಕಾರವಾರ ಶಾಸಕ ಸತೀಶ್ ಸೈಲ್ ಮತ್ತೇ ಬಂಧನ!

ಕಾರವಾರ ಸೆ.09: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಭಂದಿಸಿದಂತೆ ಜಾರಿ ನಿರ್ದೇಶನಾಲಯ ಬಂಧಿಸಿದೆ.

ಆಗಸ್ಟ್ 13 ಮತ್ತು 14ರಂದು ಕಾರವಾರದ MLA ಸೈಲ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಇಡಿ ದಾಳಿಯಲ್ಲಿ 1.68 ಕೋಟಿ, 6.75ಕೆಜಿ ಚಿನ್ನ ಪತ್ತೆಯಾಗಿತ್ತು. ಜೊತೆಗೆ, ಬ್ಯಾಂಕ್ ಖಾತೆಗಳನ್ನು ಕೂಡ ವಶಕ್ಕೆ ಪಡೆಯಲಾಗಿತ್ತು..

ಇಡೀ ದಾಳಿ ಕಾರವಾರ, ಗೋವಾ, ಮುಂಬೈ ಮತ್ತು ನವದೆಹಲಿಯ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ನಡೆದಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ದಾಳಿಯ ನಂತರ ಸಾಕಷ್ಟು ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ, ಇಡಿ ಅಧಿಕಾರಿಗಳು ಶಾಸಕರನ್ನು ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ.

ಸೈಲ್ ಬಂಧನ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಲಯದಲ್ಲಿ ಆತಂಕ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ರಾಜಕೀಯವಾಗಿ ದೊಡ್ಡ ಚರ್ಚೆ ಹುಟ್ಟುಹಾಕುವ ಸಾಧ್ಯತೆಯಿದೆ. ಇನ್ನೂ ಶಾಸಕ ಸತೀಶ್‌ ಸೈಲ್‌ ಅವರನ್ನು ಬಂಧಿಸಿರುವ ಇಡಿ ಅಧಿಕಾರಿಗಳು ಇಂದು ರಾತ್ರಿಯೇ ಜಡ್ಜ್‌ ಮುಂದೆ ಹಾಜರುಪಡಿಸಲಿದ್ದಾರೆ.