ಮನುಷ್ಯತ್ವ ಮರೆತ ಕ್ರೂರ ಕೃತ್ಯ – ಸಾಕಿದ ನಾಯಿ ಮೇಲೆ ಹಲ್ಲೆ

ಆನೇಕಲ್: ಅಮಾನವೀಯ ಮನಕುಲುಕುವ ಘಟನೆ ಹೊಸೂರು ಸಮೀಪದ ಇರುತುಕೋಟೆ ಗ್ರಾಮದಲ್ಲಿ ನಡೆದಿದೆ. ಅವರೇ ಸಾಕಿದ ನಾಯಿಯನ್ನು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕೋಳಿ, ಮೇಕೆಗಳನ್ನು ಕಚ್ಚುತ್ತಿದೆ ಎಂದು ನಾಯಿಯನ್ನು ಕಂಬಕ್ಕೆ ಕಟ್ಟಿಹಾಕಿ, ವೃದ್ಧರು ಸೇರಿ ಮಾನವೀಯತೆ ಬಿಟ್ಟು ತಮ್ಮ ಮನಸ್ಸಿಗೆ ಬಂದಂತೆ ಹಲ್ಲೆ ಮಾಡಿದ್ದಾರೆ.

ಹಲ್ಲೆ ಮಾಡುವಾಗ ಸ್ಥಳದಲ್ಲೇ ಇದ್ದ ಜನರು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದರೆ ಕರುಳು ಕಿತ್ತು ಬರುವಂತಿದೆ. ನಾಯಿ ಎಷ್ಟೇ ಕಿರುಚಾಡಿದರೂ ಕೂಡ ಅಲ್ಲಿದ್ದವರು ಯಾರು ಕೂಡಾ ನಾಯಿಯ ರಕ್ಷಣೆಗೆ ಬಂದಿಲ್ಲ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳಕ್ಕೆ ಕೃಷ್ಣಗಿರಿ ಜಿಲ್ಲಾ ಪ್ರಾಣಿ ಹಿಂಸೆ ತಡೆ ಸಂಘದ ಸದಸ್ಯರು ಭೇಟಿ ನೀಡಿ, ನಾಯಿಯ ರಕ್ಷಣೆ ಮಾಡಿದ್ದಾರೆ. ಸದ್ಯ ನಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ನಾಯಿಯ ಮಾಲೀಕ ಮತ್ತು ಮತ್ತೋರ್ವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.