ಹಾಸನ: ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ,ಟ್ರಕ್ ಅಪಘಾತ ಸ್ಥಳಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದರು. ಪರಿಹಾರ ವಿಚಾರವಾಗಿ ಜನರ ಆಕ್ರೋಶ ವ್ಯಕ್ತಪಡಿಸಿದರು.

ವಿಮಾನ ದುರಂತದಲ್ಲಿ ಸತ್ತರೆ 1 ಕೋಟಿ ರೂ. ಪರಿಹಾರ ಕೊಡ್ತೀರಿ. ಸ್ಟೇಡಿಯಂನಲ್ಲಿ ಸತ್ತರೆ 50 ಲಕ್ಷ ರೂ. ಕೊಡ್ತೀರಿ. ಬಡವರ ಮಕ್ಕಳು ಸತ್ತರೆ ಬೆಲೆ ಇಲ್ವಾ? ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಬಡವರ ಮಕ್ಕಳು ಸತ್ತಿದ್ದಾರೆ ಹೆಚ್ಚಿನ ಪರಿಹಾರ ಕೊಡಬೇಕು. 25 ಲಕ್ಷ ರೂ. ಕೊಡುವಂತೆ ಸಚಿವರಿಗೆ ಜನ ಆಗ್ರಹಿಸಿದ್ದಾರೆ.
ಕೇರಳದಲ್ಲಿ ಸತ್ತರೆ ಕರ್ನಾಟಕದಿಂದ ಪರಿಹಾರ ಕೊಡ್ತೀರಿ. ನಮ್ಮ ರೈತರ ಮಕ್ಕಳು ಸತ್ರೆ ಬಿಡಿಗಾಸು ಕೊಡ್ತೀರಿ. 5 ಲಕ್ಷ ಪರಿಹಾರ ಕೊಡೋದಾದರೆ ನೀವೇ ಇಟ್ಟುಕೊಳ್ಳಿ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.
ಬಂಟರಹಳ್ಳಿ ಪ್ರಭಾಕರ್ ಮನೆಗೆ ಭೇಟಿ ನೀಡಿ, ಪಾರ್ಥೀವ ಶರೀರಕ್ಕೆ ನಮಸ್ಕರಿಸಿ ಸಚಿವರು ಸಾಂತ್ವನ ಹೇಳಿದ್ದಾರೆ. ಬಳಿಕ ಅಲ್ಲಿಂದ ಇನ್ನುಳಿದವರ ಮನೆಗೂ ತೆರಳಿ ಸಾಂತ್ವನ ಹೇಳಲಿದ್ದಾರೆ.
ಗಾಯಾಳುಗಳ ಆರೋಗ್ಯ ವಿಚಾರಿಸಲಿರೋ ದೊಡ್ಡಗೌಡ್ರು
ಹಿಮ್ಸ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಹಿಮ್ಸ್‌ಗೆ ಭೇಟಿ ನೀಡಲಿದ್ದಾರೆ.
