ಡಿವಿಎಸ್‌ ಬ್ಯಾಂಕ್ ಖಾತೆ ಹ್ಯಾಕ್ ಮಾಡಿದ ಸೈಬರ್‌ ಕಳ್ಳರು- 3 ಲಕ್ಷ ದೋಚಿದ ಸೈಬರ್‌ ಕಳ್ಳರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಸೈಬರ್‌ ಕಳ್ಳರು ಹ್ಯಾಕ್ ಮಾಡಿ, 3 ಲಕ್ಷ ರೂ. ದುಡ್ಡನ್ನು ಕಳವು ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್‌ಎಂವಿ ಎಕ್ಸ್ ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ. 

ಈ ಕಾರ್ಯಕ್ರಮಕ್ಕೆ ಆಗಮಿಸಿದ ಡಿವಿಎಸ್‌ ಮಾಧ್ಯಮಗಳ ಜೊತೆ ಮಾತನಾಡಿ, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ.ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.

ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.