ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್.?

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂದಿಸಿದಂತೆ ಈಗಾಗಲೇ ಪೂರ್ವಭಾವಿ ತಯಾರಿಗಳು ಆರಂಭಗೊಂಡಿದೆ. ಚುನಾವಣೆಗೆ ಸಂಬಂಧಪಟ್ಟಂತೆ ಆಗಸ್ಟ್ 25 ರಂದು 243 ವಾರ್ಡ್ ಗಳ ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ. ಸಪ್ಟೆಂಬರ್ 22 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಆಗಸ್ಟ್ 25 ರಂದು ಬಿಬಿಎಂಪಿ ಹಾಗೂ ರಾಜ್ಯ ಚುನಾವಣಾ ಆಯೋಗದಿಂದ ಜಂಟಿ ಸುದ್ದಿಗೋಷ್ಠಿ ನ್ಡೆಯುವ ಸಾಧ್ಯತೆ ಇದೆ.