ಬೆಂಗಳೂರು ಸೇರಿ ಹಲವಾರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 20: ಕಳೆದ ಮೂರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕೆಲವೆಡೆ ಧಾರಾಕಾರ ಮಳೆಯಿಂದ ಹಳ್ಳಗಳು ಉಕ್ಕಿ ಹರಿದು ಗ್ರಾಮಾಂತರ ಪ್ರದೇಶಗಳಿಗೆ ನೀರು ನುಗ್ಗಿದೆ. ಜಮೀನುಗಳಲ್ಲಿ ಬೆಳೆ ಹಾನಿಯೂ ಸಂಭವಿಸಿದೆ. ಇಂತಹ ಸ್ಥಿತಿಯ ಮಧ್ಯೆ ಸೆಪ್ಟೆಂಬರ್ 22 ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್ ಘೋಷಣೆ: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.
ಕರಾವಳಿ ಜಿಲ್ಲೆಗಳು – ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ – ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.