ದ.ಕನ್ನಡದಿಂದ ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ಸೆಪ್ಟೆಂಬರ್ 20ರಂದು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದು, ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಕಳುಹಿಸಲಾಗಿದೆ.

ತಿಮರೋಡಿ ವಿರುದ್ಧ ಸುಮಾರು 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಬುರುಡೆ ಪ್ರಕರಣ ಮತ್ತು ಶವ ಹೂತಿಟ್ಟ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪವೂ ಅವರ ಮೇಲೆ ಹೊರಿಸಲಾಗಿದೆ.