ಯಲ್ಲಾಪುರ: ಅನಧಿಕೃತವಾಗಿ ತಂಬಾಕು ಮಾರಾಟ ಮಾಡುತ್ತಿದ್ದ ತಾಲೂಕಿನ ಅರಬೈಲ್ ಹಾಗೂ ಗುಳ್ಳಾಪುರದ ಸುಮಾರು 10 ಕ್ಕೂ ಹೆಚ್ಚು ಅಂಗಡಿಗಳ ಮೇಲೆ ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.
ಅಂಗಡಿಕಾರರಿಗೆ ನೋಟಿಸ್ ನೀಡಿ ದಂಡ ವಿಧಿಸಿದ್ದಾರೆ. ಯಾವುದೇ ಮುನ್ನೆಚ್ಚರಿಕೆ ಫಲಕ ಇಲ್ಲದೇ ತಂಬಾಕು ಮಾರಾಟ ಹಾಗೂ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ ಅಪರಾಧವಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಿ 2800 ರೂ ದಂಡ ವಿಧಿಸಿದ್ದಾರೆ.
ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ, ಉಪತಹಸೀಲ್ದಾರ ಎಚ್.ಎನ್.ರಾಘವೇಂದ್ರ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ಟ, ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ,ಪೊಲೀಸ್ ಸಿಬ್ಬಂದ್ದಿ ವಿಜಯ ಜಾಧವ್, ಎಲ್.ಎಚ್.ವಿ ವಂದನಾ ನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.