ಬೆಂಗಳೂರು: ಕನ್ನಡದ ಅಕ್ಷರ ಮಾಂತ್ರಿಕ ಎಸ್.ಎಲ್. ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ರವೀಂದ್ರ ಕಲಾಮಂದಿರದಲ್ಲಿ ಭೈರಪ್ಪ ಅವರ ಪಾರ್ಥೀವ ಶರೀರಕ್ಕೆ ಅಂತಿಮ ದರ್ಶನ ನೀಡಿದ ಬಳಿಕ, ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಅವರು ಬಹಳ ಕಾಲ ಮೈಸೂರಿನಲ್ಲಿ ಕಾಲ ಕಳೆಯಿದ್ದರು, ಅದಕ್ಕಾಗಿ ಸ್ಮಾರಕ ಕೂಡ ಅಲ್ಲೇ ನಿರ್ಮಿಸಲಾಗುವುದು” ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಯಾವುದೇ ರಾಜಕೀಯ ಹೇಳಿಕೆಗಳಿಗೆ ಪ್ರಾಮುಖ್ಯತೆ ನೀಡದೇ, ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಸಕ್ರಿಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

