ಏಷ್ಯಾಕಪ್‌ ಇತಿಹಾಸದಲ್ಲಿ ಇಂಡೋ- ಪಾಕ್ ಫೈನಲ್-ಫಸ್ಟ್‌ ಟೈಮ್‌ !

ದುಬೈ: ನಿರ್ಣಾಯಕ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್‌ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಹೀಗಾಗಿ ಇದೇ ಮೊದಲಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

1984ರಲ್ಲಿ ಏಷ್ಯಾ ಕಪ್ ಪ್ರಾರಂಭವಾದ ಬಳಿಕ ಈವರೆಗೆ ಒಟ್ಟು 16 ಬಾರಿ ಉಭಯ ತಂಡಗಳ ನಡುವೆ ಪಂದ್ಯಾವಳಿ ಜರುಗಿದೆ. ಆದ್ರೆ ಈವರೆಗೂ ಕ್ರಿಕೆಟ್‌ನ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ಫೈನಲ್ ತಲುಪಿದ್ದಿಲ್ಲ. ಇದೀಗ ಭಾನುವಾರದಂದು ನಡೆಯಲಿರುವ ಪಂದ್ಯ ಅಕ್ಷರಶಃ ಹೈವೋಲ್ಟೇಜ್ ಪಂದ್ಯವಾಗಲಿದೆ.