ಶಿರಸಿಯ ಮಾರಿಕಾಂಬಾ ಕ್ಷೇತ್ರಕ್ಕೆ ಭೇಟಿ ನೀಡಿದ ಶಿವಣ್ಣ ದಂಪತಿ

ಕಾರವಾರ: ನವರಾತ್ರಿ ಹಬ್ಬದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್‌ಕುಮಾರ್ ದಂಪತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶಿರಸಿಯ ಪ್ರಸಿದ್ಧ ದೇವಾಲಯಕ್ಕೆ ಆಗಮಿಸಿದ ಶಿವಣ್ಣ ಮತ್ತು ಗೀತಾ ಶಿವರಾಜ್‌ಕುಮಾರ್ ದಂಪತಿ ತಮ್ಮ ಇಷ್ಟದೇವಿಗೆ ಶ್ರದ್ಧಾ ಭಕ್ತಿಗಳೊಂದಿಗೆ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು, ಶಿವರಾಜ್‌ಕುಮಾರ್ ಅನಾರೋಗ್ಯಕ್ಕೆ ಒಳಗಾದ ಸಂದರ್ಭದಲ್ಲಿ ಸಹ ಶಿರಸಿ ಮಾರಿಕಾಂಬಾ ದೇವಿ ಸನ್ನಿಧಿಗೆ ಆಗಮಿಸಿ ಪೂಜೆ ಸಲ್ಲಿಸಿ ಹರಕೆ ಕಟ್ಟಿಕೊಂಡಿದ್ದರು.