ಉತ್ತರ ಕರ್ನಾಟಕ ಪ್ರವಾಹ – ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ಕೋರಿ ಯತ್ನಾಳ್‌ರಿಂದ ಮೋದಿ ಅವರಿಗೆ ಪತ್ರ

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಭಾರೀ ಹಾನಿಯಾಗಿದ್ದು, ರಾಜ್ಯ ಸರ್ಕಾರ ಇನ್ನೂ ಪರಿಹಾರ ಘೋಷಿಸಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಪರಿಹಾರ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಯತ್ನಾಳ್ ಅವರು, ಪ್ರವಾಹದಿಂದ ಉಂಟಾದ ಹಾನಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ, ಕೇಂದ್ರವು ತಕ್ಷಣ ಕ್ರಮ ಕೈಗೊಂಡು ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.