ಹಾವೇರಿ/ಗದಗ: ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಹಾವೇರಿ ಹಾಗೂ ಗದಗ ಜಿಲ್ಲೆಗಳು ಸೇರ್ಪಡೆಗೊಂಡಿವೆ. ದೇಶದ 100 ಜಿಲ್ಲೆಗಳಲ್ಲಿ ಜಾರಿಯಾಗುತ್ತಿರುವ ಈ ಯೋಜನೆಗೆ ಉಭಯ ಜಿಲ್ಲೆಗಳಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ ದೊರೆತಿದೆ. ಕೃಷಿ ಉತ್ಪಾದನೆ ಹೆಚ್ಚಿಸುವುದು, ನೀರಾವರಿ ಸೌಲಭ್ಯ ಒದಗಿಸುವುದು ಹಾಗೂ ಅಲ್ಪ–ದೀರ್ಘಾವಧಿಯ ಹಣಕಾಸು ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಪಂಚಾಯತ್ ಹಾಗೂ ಬ್ಲಾಕ್ ಮಟ್ಟದಲ್ಲಿ ದಾಸ್ತಾನು ಘಟಕಗಳ ನಿರ್ಮಾಣ ನಡೆಯಲಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಹಾವೇರಿಯ ಹನುಮನಹಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಜಿಲ್ಲೆಯ ಧನ್ ಧಾನ್ಯ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

