ನ.25 ಕ್ಕೆ ಅಯೋಧ್ಯೆಯಲ್ಲಿ 22 ಅಡಿ ಉದ್ದದ ಕೇಸರಿ ಧ್ವಜಾರೋಹಣ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯ ಮೇಲೆ ನ.25 ರಂದು 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ನಿರ್ಧರಿಸಲಾಗಿದೆ ಎಂದು ಧಾರ್ಮಿಕ ಸಮಿತಿ ಸದಸ್ಯ ಗೋಪಾಲ್‌ ರಾವ್‌ ಹೇಳಿದರು.

ಜಾನಕಿ ಘಾಟ್‌ನ ವೈದೇಹಿ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಧಾರ್ಮಿಕ ಸಮಿತಿ ಸದಸ್ಯರ ಮಹತ್ವದ ಸಭೆಯಲ್ಲಿ ಮಾತನಾಡಿ, ಧ್ವಜಾರೋಹಣ ಕಾ‍ರ್ಯಕ್ರಮದ ರೂಪುರೇಷೆ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ ಎಂದರು.

191 ಅಡಿ ಎತ್ತರ, 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜ ಹಾರಿಸಲು ತೀರ್ಮಾನಿಸಿದ್ದು, ಧ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲು ಶ್ರೀರಾಮ ಜನ್ಮಭೂಮಿ ತೀ‍ರ್ಥಕ್ಷೇತ್ರ ಸಮಿತಿಯು ಸಮ್ಮತಿಸಿದೆ ಎಂದು ತಿಳಿಸಿದರು.

ಸಭೆಯಲ್ಲಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಖಜಾಂಚಿ ಗೋವಿಂದ್ ದೇವಗಿರಿ, ಸದಸ್ಯರಾದ ಡಾ. ಅನಿಲ್ ಮಿಶ್ರಾ, ಗೋಪಾಲ್ ರಾವ್ ಇತರರಿದ್ದರು.