ನವದೆಹಲಿ, ಅಕ್ಟೋಬರ್ 13: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿ ಎಸ್‌ಐಟಿ ತನಿಖೆ ನಡೆಸಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷ ನಾಯಕರು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದರು. ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳು ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ, ಎಸ್‌ಐಟಿ ತನಿಖೆಗೆ ಅನುಮತಿ ನೀಡದೆ, ಈ ಪ್ರಕರಣವನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದಾರೆ.


