ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯ ಕಾಗಡಿಕಟ್ಟೆ ಬಳಿ ಇಂದು ಬೆಳಿಗ್ಗೆ 2.30ರ ವೇಳೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿಯಾದ ಘಟನೆ ನಡೆದಿದೆ. ಅಶೋಕ್ ಲೈಲ್ಯಾಂಡ್ ಗೂಡ್ಸ್‌ ವಾಹನ (ಸಂಖ್ಯೆ KA13-B 3078) ನಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಅಪಘಾತದಲ್ಲಿ ಮೂರು ಗೋವುಗಳು ಗಾಯಗೊಂಡಿದ್ದು, ಇಬ್ಬರು ಆರೋಪಿಗಳನ್ನು ತಡರಾತ್ರಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆರೋಪಿಗಳು ಇನ್ನೋವಾ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆಯ ಬಳಿಕ ಕೊಡಗಿನಲ್ಲಿ ಗೋವುಗಳ ಅಕ್ರಮ ಸಾಗಾಟ ಮತ್ತು ಗೋಹತ್ಯೆ ಪ್ರಕರಣಗಳು ಮತ್ತೆ ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.