ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ

ವಿಜಯಪುರ/ಬೆಂಗಳೂರು (ಅ.13): ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು (ಅಕ್ಟೋಬರ್ 13, 2025) ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು.

ನಿನ್ನೆ ಸಂಭವಿಸಿದ ಹೃದಯಾಘಾದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.