ಹೊನ್ನಾವರ ಅ.14 : ಸ್ನೇಹಕುಂಜ ಸಂಸ್ಥೆಯ ಸಂಸ್ಥಾಪಕಿ ಡಾ. ಕುಸುಮಾ ಸೊರಬ ಅವರ 87ನೇ ಜನ್ಮದಿನೋತ್ಸವದ ಅಂಗವಾಗಿ ಸ್ನೇಹಕುಂಜದಲ್ಲಿದಾಯಿ ತರಬೇತಿ ಪಡೆದ ಹಾಗೂ ಸಂಸ್ಥೆಯ ವಿವಿಧ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದ ಕಾರ್ಯಕರ್ತರ ಹಾಗೂ ಸ್ನೇಹ ಕುಂಜದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಯಕರ್ತರ ಪುನರ ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು…

ಕಾಸರಕೋಡನ ಕುಸುಮಾ ಸಭಾಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಕುಂಜ ಸಂಸ್ಥೆ ಅಧ್ಯಕ್ಷ ಡಾ. ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಸ್ನೇಹಕುಂಜ ಹಿರಿಯ ದಾಯಿಯಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದ ಮಂಗಲಾ ಮಂಜುನಾಥ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ರು..ಈ ವೇಳೆ ಸೊರಬರವರ ಅಭಿಮಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು..

