ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆ – ಇಂದು ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಾರುತ ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದ್ದು, ಸಂಜೆ ವೇಳೆಗೆ ಮಳೆ ಬೀಳುವ ಮುನ್ಸೂಚನೆ ನೀಡಿದೆ. ಗಾಳಿಯ ವೇಗ ಗಂಟೆಗೆ 30ರಿಂದ 40 ಕಿಲೋಮೀಟರ್‌ಗಳಷ್ಟು ಇರಲಿದ್ದು, ಈ ಅವಧಿಯಲ್ಲಿ ಸಿಡಿಲು–ಮಿಂಚು ಸಂಭವಿಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.