ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಷಯದ ಬಗ್ಗೆ ಮಾಹಿತಿ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 15: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಹೇಳಿದ್ದಕ್ಕಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂಬ ವಿಷಯದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಕುರಿತು ಸಚಿವರ ಜೊತೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಬೆದರಿಕೆ ಕರೆಗಳ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮಾತನಾಡಿ ನಂತರ ಪ್ರತಿಕ್ರಿಯೆ ನೀಡುತ್ತೇನೆ,” ಎಂದರು.