ಸಚಿವ ಸ್ಥಾನ ಬಿಡಲು ಹೇಳಿದರೆ ಬಿಟ್ಟುಕೊಡಲು ಸಿದ್ಧನಿದ್ದೇನೆ: ಸಚಿವ ದಿನೇಶ್ ಗುಂಡೂರಾವ್

ಯಲ್ಲಾಪುರ, ಅಕ್ಟೋಬರ್ 15: “ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್ ಹೇಳಿದರೆ, ನಾನು ಯಾವತ್ತೂ ಸಿದ್ಧ,” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ತಾನು ಬದ್ಧನಾಗಿದ್ದೇನೆ ಎಂದರು. “ಮುಖ್ಯಮಂತ್ರಿಗಳ ಮನೆಯಲ್ಲಿ ಸೋಮವಾರ ರಾತ್ರಿ ನಡೆದ ಔತಣಕೂಟದಲ್ಲಿ ಸಂಪುಟ ಪುನಾರಚನೆ ಕುರಿತ ಯಾವುದೇ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಎಲ್ಲ ಸಚಿವರಿಗೂ ತಮ್ಮ ಇಲಾಖೆಯಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ ಅಷ್ಟೇ,” ಎಂದು ಸ್ಪಷ್ಟಪಡಿಸಿದರು.