‘ಕಾಂತಾರ ಚಾಪ್ಟರ್ 1’ ಯಶಸ್ಸಿನ ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆದರೂ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇಂದಿಗೂ ಚಿತ್ರಮಂದಿರಗಳ ಮುಂದೆ ಹೌಸ್‌ಫುಲ್‌ ಬೋರ್ಡುಗಳು ಕಾಣಿಸುತ್ತಿವೆ. ಸಿನಿಮಾದ ಯಶಸ್ಸಿನಿಂದ ಖುಷಿಯಾಗಿರುವ ರಿಷಬ್ ಶೆಟ್ಟಿ ಇಂದು (ಅಕ್ಟೋಬರ್ 16) ಮೈಸೂರಿಗೆ ಭೇಟಿ ನೀಡಿ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.