ಖಾಸಗಿ ಮತ್ತು ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025-26ನೇ ಸಾಲಿನ SSLC ಮತ್ತು ದ್ವಿತೀಯ PUC ಪರೀಕ್ಷೆ-1ಕ್ಕೆ ಹಾಜರಾಗಲು ಬಯಸುವ ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳು ಮತ್ತು ಶಾಲಾ/ಕಾಲೇಜು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ವಿವರಗಳನ್ನು https://kseeb.karnataka.gov.in ಜಾಲತಾಣದಲ್ಲಿ ಅಕ್ಟೋಬರ್ 15 ರಿಂದ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಕುರಿತು ವಿವರವಾದ ಮಾರ್ಗಸೂಚಿ ಜಾಲತಾಣದಲ್ಲಿ ಲಭ್ಯವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.