
ಬೆಂಗಳೂರು ಅ.17: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಯ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್ ಅನಂತಪುರದ ಬಳಿ ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ..

ಗ್ರೀನ್ ಲೈನ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೊರಟಿತ್ತು. ಈ ವೇಳೆ ಟಯರ್ ಬ್ಲಾಸ್ಟ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬ್ಲಾಸ್ಟ್ ಆಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನೂ ಬಿಟ್ಟು ಬಸ್‌ನಿಂದ ಜಿಗಿದಿದ್ದಾರೆ. ಹೀಗಾಗಿ ಪ್ರಯಾಣಿರ ಸಂಪೂರ್ಣ ಲಗೇಜ್‌ಗಳು ಬೆಂಕಿಗೆ ಆಹುತಿಯಾಗಿದೆ. ವಿದ್ಯಾರ್ಥಿಗಳ ಪ್ರಮಾಣ ಪತ್ರ, ದುಬಾರಿ ವಸ್ತುಗಳು ಸುಟ್ಟು ಭಸ್ಮವಾಗಿದೆ.


