ಶಿವಮೊಗ್ಗ, ಅಕ್ಟೋಬರ್ 20: ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಲು ಕಾದು ಕುಳಿತಿರುವ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ. ರಾಜ್ಯದಾದ್ಯಂತ 26 ಸಾವಿರ ಶಿಕ್ಷಕರನ್ನು ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಅಧಿಸೂಚನೆ ಈಗಾಗಲೇ ಹೊರಬಿದ್ದಿದ್ದು, ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದೇ ವೇಳೆ ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

