ಪಣಜಿ, ಅಕ್ಟೋಬರ್ 19: ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ದೀಪಾವಳಿಯನ್ನು ಆಚರಿಸಿದರು. ಗೋವಾ ಮತ್ತು ಕಾರವಾರ ಕರಾವಳಿಯಲ್ಲಿರುವ ಐಎನ್‌ಎಸ್ ವಿಕ್ರಾಂತ್‌ಗೆ ಭೇಟಿ ನೀಡಿದ ಅವರು, ನೌಕಾಪಡೆಯ ವೀರ ಯೋಧರ ಜೊತೆ ಬೆಳಕಿನ ಹಬ್ಬವನ್ನು ಸಂಭ್ರಮಿಸಿದರು.

ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೀಪಾವಳಿಯ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು. ಈ ಭೇಟಿಯನ್ನು ಸ್ಮರಣೀಯ ಕ್ಷಣವೆಂದು ವರ್ಣಿಸಿದ ಅವರು, “ನೌಕಾಪಡೆಯ ವೀರ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಅದೃಷ್ಟ ನನಗೆ ಸಿಕ್ಕಿದೆ” ಎಂದು ಸಂತೋಷ ವ್ಯಕ್ತಪಡಿಸಿದರು.

ಅವರು ಮುಂದುವರಿದು, ಮಾವೋವಾದಿ ನಕ್ಸಲರ ವಿರುದ್ಧ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾತನಾಡಿದರು. “ದೇಶದಲ್ಲಿ ಈಗ ಕೇವಲ ಶೇಕಡಾ 11ರಷ್ಟು ಪ್ರದೇಶದಲ್ಲೇ ನಕ್ಸಲಿಸಂ ಪ್ರಭಾವ ಉಳಿದಿದೆ. ಛತ್ತೀಸಗಢದ ಕೇವಲ ಮೂರು ಜಿಲ್ಲೆಗಳಲ್ಲಿ ಮಾತ್ರ ನಕ್ಸಲ್ ಚಟುವಟಿಕೆಗಳು ಕಂಡು ಬರುತ್ತಿವೆ. 100ಕ್ಕೂ ಹೆಚ್ಚು ಜಿಲ್ಲೆಗಳು ನಕ್ಸಲ್ ಪ್ರಭಾವದಿಂದ ಮುಕ್ತಗೊಂಡಿವೆ. ಈ ಪ್ರದೇಶಗಳಲ್ಲಿ ಇದೀಗ ವೇಗವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ” ಎಂದು ಪ್ರಧಾನಮಂತ್ರಿ ಹೇಳಿದರು.
