ಶ್ವೇತಭವನದಲ್ಲಿ ದೀಪ ಬೆಳಗಿಸಿ ದೀಪಾವಳಿ ಆಚರಿಸಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಅಕ್ಟೋಬರ್ 22: ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೀಪಾವಳಿಯನ್ನು ಸಂಭ್ರಮಿಸಿದರು. ಈ ವೇಳೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಹೊಗಳಿ, “ಅವರು ಒಬ್ಬ ಮಹಾನ್ ವ್ಯಕ್ತಿ” ಎಂದು ಕರೆದರು. ಈ ಕಾರ್ಯಕ್ರಮದಲ್ಲಿ ಅಮೆರಿಕದಲ್ಲಿನ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಭಾರತಕ್ಕೆ ಹೊಸ ಅಮೆರಿಕ ರಾಯಭಾರಿ ಸೆರ್ಜಿೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಹಾಗೂ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಉಪಸ್ಥಿತರಿದ್ದರು.

“ನಾನು ಇಂದು ಭಾರತದ ಪ್ರಧಾನಿಯೊಂದಿಗೆ ಮಾತನಾಡಿದ್ದೇನೆ. ನಮ್ಮ ನಡುವೆ ಉತ್ತಮ ಸಂಭಾಷಣೆ ನಡೆಯಿತು. ನಾವು ವ್ಯಾಪಾರ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಭಾರತವು ರಷ್ಯಾದಿಂದ ಹೆಚ್ಚಿನ ತೈಲವನ್ನು ಖರೀದಿಸುವುದಿಲ್ಲವೆಂದು ಅವರು ಭರವಸೆ ನೀಡಿದ್ದಾರೆ,” ಎಂದು ಟ್ರಂಪ್ ಪುನರುಚ್ಚರಿಸಿದರು.