ಬೆಂಗಳೂರು, ಅಕ್ಟೋಬರ್ 24: ಕರ್ನಾಟಕದಲ್ಲಿ ಇಂದು ಭಾರೀ ಮಳೆಯ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಯಲಿದ್ದು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಾತ್ರ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

