ಅಪಹರಣಕ್ಕೊಳಗಾದ 8 ವರ್ಷದ ಬಾಲಕ ಶಿವಮೊಗ್ಗದಲ್ಲಿ ಪತ್ತೆ.?

ಭಟ್ಕಳ: ನಿನ್ನೆ ರಾತ್ರಿ ತಾಲೂಕಿನ ಆಜಾದ್ ನಗರದಲ್ಲಿ ಅಪಹರಣಕ್ಕೊಳಗಾದ  ಎಂಟು ವರ್ಷದ ಬಾಲಕ ಶಿವಮೊಗ್ಗದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು.

ನಂತರ ಅಕ್ಕಪಕ್ಕದ ಮನೆಗಳ ಅವರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾತ್ರಿ 8 ಗಂಟೆ ಸುಮಾರಿಗೆ ಮಾರುತಿ ಇಕೋ ವ್ಯಾನ್ ಬರುತ್ತಿರುವುದು ಕಂಡು ಬಂದಿದ್ದು, ಅದರಲ್ಲಿದ್ದ ವ್ಯಕ್ತಿಯೊಬ್ಬರು ಇಳಿದು ಬಾಲಕನನ್ನು ಅಪಹರಿಸಿ ಕಾರಿನಲ್ಲಿ ಹಾಕಿಕೊಂಡು ಬಳಿಕ ವಾಹನದಲ್ಲಿ ಪರಾರಿಯಾಯಾಗಿದ್ದರು.

ಪೊಲೀಸರಿಗೆ ಮಾಹಿತಿ ಲಭಿಸಿದ ಕೂಡಲೇ ಎರಡು ತಂಡ ರಚನೆ ಮಾಡಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಕಾರ್ಯಾಚರಣೆ ವೇಳೆ ಶಿವಮೊಗ್ಗದಲ್ಲಿ ಬಾಲಕ ಇರುವ ಮಾಹಿತಿ ತಿಳಿದು ಭಟ್ಕಳ ಪೊಲೀಸರು ಶಿವಮೊಗ್ಗಕ್ಕೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಹೆಚ್ಚಿನ ಮಾಹಿತಿ ಪೊಲೀಸ ಮೂಲದಿಂದ ತಿಳಿದು ಬರಬೇಕಿದೆ.