ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ವಿಶೇಷ ಸಿದ್ಧತೆಗಳು ನಡೆದಿವೆ. ಪುನೀತ್ ಸಮಾಧಿ ಬಣ್ಣಬಣ್ಣದ ಗುಲಾಬಿ ಹೂಗಳಿಂದ ಅಲಂಕರಿಸಲ್ಪಟ್ಟಿದೆ. ಅಪ್ಪು ಇಷ್ಟಪಟ್ಟ ಖಾದ್ಯಗಳನ್ನು ಸಮರ್ಪಿಸಲಿದ್ದಾರೆ. ಅಭಿಮಾನಿಗಳೂ ಕಂಠೀರವ ಸ್ಟುಡಿಯೋದಲ್ಲಿ ಇಂದು ಇಡೀ ದಿನ ಅನ್ನಸಂತರ್ಪಣೆ, ನೇತ್ರದಾನ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಿದ್ದಾರೆ. ರಾಜ್ಯದ ಮೂಲೆ ಮೂಲಗಳಿಂದ ಅಭಿಮಾನಿಗಳು ಆಗಮಿಸಿ ಅಪ್ಪುಗೆ ನಮನ ಸಲ್ಲಿಸುತ್ತಿದ್ದು, ಅನೇಕರು ತಮ್ಮ ತಮ್ಮ ಸ್ಥಳಗಳಿಂದಲೇ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

