ಅಮರಾವತಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡ ಮೋಂಥಾ ಚಂಡಮಾರುತ ಮಂಗಳವಾರ ರಾತ್ರಿ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿ ಭಾರೀ ಮಳೆ ಮತ್ತು ಹಾನಿ ಉಂಟುಮಾಡಿದೆ. ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ 90 ರಿಂದ 100 ಕಿ.ಮೀ. ವೇಗದಲ್ಲಿ ಅಪ್ಪಳಿಸಿದ ಚಂಡಮಾರುತದಿಂದ ಕರಾವಳಿ ಪ್ರದೇಶಗಳಲ್ಲಿ ತೀವ್ರ ಗಾಳಿ ಹಾಗೂ ಮಳೆ ದಾಖಲಾಗಿದೆ.

ಆಂಧ್ರ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳು ಮುಂದುವರಿದಿವೆ.
