ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲೇ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಎಕ್ಸ್‌ನಲ್ಲಿ ಕನ್ನಡದಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, “ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ಗೌರವಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನ ಮತ್ತು ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸದಾ ಸಂತೋಷ ಹಾಗೂ ಆರೋಗ್ಯದಿಂದ ಇರಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ತಿಳಿಸಿದ್ದಾರೆ.

ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕನ್ನಡ ಬಾವುಟಗಳು ರಾರಾಜಿಸುತ್ತಿವೆ. ಕನ್ನಡಾಂಬೆ ಸ್ಮರಿಸಿ ಕನ್ನಡಿಗರು ಹರ್ಷೋಲ್ಲಾಸದಿಂದ ರಾಜ್ಯೋತ್ಸವವನ್ನು ಆಚರಿಸುತ್ತಿದ್ದಾರೆ.
