ನಾಳೆಯಿಂದ ರಾಜ್ಯದ ಹಲವು ಭಾಗಗಳಲ್ಲಿ 3 ದಿನ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ನವೆಂಬರ್ 5 ಮತ್ತು 6ರಂದು ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಈ ಎರಡು ದಿನಗಳು ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.